News Karnataka Kannada
Wednesday, May 01 2024
ಕ್ರೀಡೆ

ವಿರಾಟ್ ಕೊಹ್ಲಿ ದಾಖಲೆ ಮುರಿದ ಶಿಖರ್ ಧವನ್

ಐಪಿಎಲ್‌ ನ 11ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶಿಖರ್ ಧವನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ 50 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 70 ರನ್ ಬಾರಿಸಿದ್ದರು.
Photo Credit : NewsKarnataka

ಮುಂಬೈ: ಐಪಿಎಲ್‌ ನ 11ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶಿಖರ್ ಧವನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ 50 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 70 ರನ್ ಬಾರಿಸಿದ್ದರು.

ಈ ಹಾಫ್ ಸೆಂಚುರಿಯೊಂದಿಗೆ ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ ವೇಳೆ ಅತ್ಯಧಿಕ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಶಿಖರ್ ಧವನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು.

ಹೌದು. . ‌ಐಪಿಎಲ್​ನಲ್ಲಿ 232 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 52 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಅರ್ಧಶತಕಗಳಲ್ಲಿ 21 ಹಾಫ್ ಸೆಂಚುರಿಗಳು ಚೇಸಿಂಗ್ ವೇಳೆ ಮೂಡಿಬಂದಿರುವುದು ವಿಶೇಷ. ಈ ಮೂಲಕ ಐಪಿಎಲ್ ರನ್​​ ಚೇಸಿಂಗ್​ ವೇಳೆ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಶಿಖರ್ ಧವನ್ ಯಶಸ್ವಿಯಾಗಿದ್ದಾರೆ. ಐಪಿಎಲ್​ನಲ್ಲಿ 219 ಪಂದ್ಯಗಳನ್ನಾಡಿರುವ ಧವನ್ ಒಟ್ಟು 51 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇದೇ ವೇಳೆ ಚೇಸಿಂಗ್​ನಲ್ಲಿ ಶಿಖರ್ ಬ್ಯಾಟ್​ನಿಂದ ಒಟ್ಟು 22 ಅರ್ಧಶತಕಗಳು ಮೂಡಿಬಂದಿವೆ. ಈ ಮೂಲಕ ಕೊಹ್ಲಿ ಹೆಸರಿನಲ್ಲಿದ್ದ ಚೇಸಿಂಗ್ ಹಾಫ್ ಸೆಂಚುರಿ ದಾಖಲೆಯನ್ನು ಶಿಖರ್ ಧವನ್ ತಮ್ಮದಾಗಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು