ನವದೆಹಲಿ: ಟೀಂ ಇಂಡಿಯಾದ ಆಟಗಾರ ಶಿಖರ್‌ ಧವನ್‌ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು.

ವೃತ್ತಿ ಜೀವನದುದ್ದಕ್ಕೂ ಅವರ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು. ಮೊದಲಿಗೆ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತಿದ್ದೇನೆ. ಭಾರತ ತಂಡವನ್ನು ಸೇರಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಸೇರಿದ ನಂತರ ಇಡೀ ತಂಡ, ಕುಟುಂಬ, ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಈಗ ವಿದಾಯ ಹೇಳುವ ಸಮಯ ಬಂದಿದೆ.

ನನ್ನ ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ ಮತ್ತು ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದರು.

https://x.com/SDhawan25/status/1827164438673096764?