ಮುಂಬೈ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಂದ ದೂರವಾಗಿ ಮೂರನೇ ಬಾರಿಗೆ ವಿವಾಹವಾದ ನಂತರ ಕಳೆದೊಂದು ವಾರದಿಂದ ಎಲ್ಲಡೆ ಚರ್ಚೆಯಲ್ಲಿದ್ದಾರೆ.
ಇದೀಗ ಶೋಯೆಬ್ ಮಲಿಕ್ ಮ್ಯಾಚ್ ಫಿಕ್ಸಿಂಗ್ ಬಲೆಗೆ ಸಿಲುಕಿ ಸುದ್ದಿಯಾಗಿದ್ದಾರೆ. ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ವೇಳೆ ಪಾಕಿಸ್ತಾನಿ ಕ್ರಿಕೆಟಿಗ ಮ್ಯಾಚ್ ಫಿಕ್ಸಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಫ್ರಾಂಚೈಸಿ ತಂಡ ಫಾರ್ಚೂನ್ ಬಾರಿಶಾಲ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಒಪ್ಪಂದವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರ ಹೆಸರು ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವುದು ಹೊಸ ವಿಷಯವೇನಲ್ಲ. ಈ ಹಿಂದೆಯೂ ಹಲವು ದೊಡ್ಡ ಹೆಸರುಗಳು ಇದರಲ್ಲಿ ಮುಂದೆ ಬಂದಿವೆ. ಇದರಿಂದ ಒಬ್ಬ ನಾಯಕ ಮತ್ತು ಇಬ್ಬರು ಬೌಲರ್ಗಳ ವೃತ್ತಿಜೀವನ ಹಾಳಾಗಿದೆ.
ಇದೀಗ ಮಾಜಿ ನಾಯಕ ಶೋಯೆಬ್ ಮಲಿಕ್ ಹೆಸರು ಫಿಕ್ಸಿಂಗ್ ಗೂ ತಳುಕು ಹಾಕಿಕೊಂಡಂತಿದೆ. ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಸಮಯದಲ್ಲಿ, ಅವರು ಖುಲ್ನಾ ಟೈಗರ್ಸ್ ವಿರುದ್ಧ ಒಂದೇ ಓವರ್ನಲ್ಲಿ ಮೂರು ನೋ ಬಾಲ್ಗಳನ್ನು ಎಸೆದರು ಮತ್ತು ಇದರಿಂದಾಗಿ, ಅವರ ವಿರುದ್ಧ ಫಿಕ್ಸಿಂಗ್ ಶಂಕೆ ವ್ಯಕ್ತವಾಗುತ್ತಿದೆ. ಪಾಕ್ ಕ್ರಿಕೆಟಿಗ ಶೋಯೆಬ್ ಮಲಿಕ್ ಮೇಲೆ ಮ್ಯಾಚ್ ಫಿಕ್ಸಿಂಗ್ ಶಂಕೆಯಿಂದಾಗಿ, ಫಾರ್ಚೂನ್ ಬಾರಿಶಾಲ್ ತಂಡವು ಅವರ ಒಪ್ಪಂದವನ್ನು ರದ್ದು ಮಾಡಿದೆ.
ಫಾರ್ಚೂನ್ ಬಾರಿಶಾಲ್ ತಂಡದ ಪರ ಕಣಕ್ಕಿಳಿಯುತ್ತಿರುವ ಶೋಯೆಬ್ ಮಲಿಕ್ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದು, ಅವರನ್ನು ತಂಡದಿಂದ ಹೊರಹಾಕಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ