ಮುಂಬೈ: 2025 ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಸರಣಿ ವೇಳೆ ಇಂಜುರಿಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದ ಆಟಗಾರ ಶ್ರೇಯಸ್ ಅಯ್ಯರ್ ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ವಿಜಯ್ ಹಜಾರೆ ಟ್ರೋಫಿಯ ಮುಂದಿನ ಪಂದ್ಯಗಳಿಗೆ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.
ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗೆ ಉಳಿದಿದ್ದ ಶ್ರೇಯಸ್ ಇದೀಗ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ವೈಸ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ.
ಇನ್ನು ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಶಾರ್ದೂಲ್ ಠಾಕೂರ್ ಮುಂಬೈ ತಂಡದಿಂದ ಹೊರಗುಳಿದಿದ್ದು ಅವರ ಬದಲು ತಂಡವನ್ನು ಶ್ರೇಯಸ್ ಅಯ್ಯರ್ ಮುಂಬೈ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

