News Karnataka Kannada
Monday, April 29 2024
ಕ್ರೀಡೆ

ವಿಶ್ವಕಪ್ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್

Shubman Gill
Photo Credit : News Kannada

ನವದೆಹಲಿ: ಈ ವರ್ಷ ರೆಡ್-ಹಾಟ್ ಫಾರ್ಮ್ನಲ್ಲಿರುವ ಭಾರತದ ಸ್ಟಾರ್ ಆರಂಭಿಕ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಭಾನುವಾರ (ಅ.8) ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ರ ಆರಂಭಿಕ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.

ವರದಿಗಳ ಪ್ರಕಾರ, 2023 ರಲ್ಲಿ 20 ಏಕದಿನ ಪಂದ್ಯಗಳಲ್ಲಿ 1230 ರನ್ ಗಳಿಸಿರುವ ಮತ್ತು ಏಕದಿನ ಶ್ರೇಯಾಂಕದಲ್ಲಿ 2 ನೇ ಸ್ಥಾನದಲ್ಲಿರುವ 24 ವರ್ಷದ ಬಲಗೈ ಬ್ಯಾಟ್ಸ್ಮನ್ 24ರ ಹರೆಯದ ಗಿಲ್ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದಾಗಿ ಅವರು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಪಂದ್ಯದಿಂದ ಹೊರಗುಳಿಯಬಹುದು ಎನ್ನಲಾಗ್ತಿದೆ. ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಬಹುದು. ಇಂದು ಮತ್ತೊಂದು ಸುತ್ತಿನ ಆರೋಗ್ಯ ಪರೀಕ್ಷೆಗಳ ನಂತರ ಅವರ ಲಭ್ಯತೆಯ ಬಗ್ಗೆ ನಿರ್ಧಾರ ಹೊರಬೀಳಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2.3 / 5. Vote count: 3

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು