ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಪುರುಷರ ಸಿಂಗಲ್ಸ್ ಎಸ್ಎಲ್4 ಈವೆಂಟ್‌ನಲ್ಲಿ ಭಾರತದ ಅನುಭವಿ ಶಟ್ಲರ್ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ನ ಲ್ಯೂಕಾಸ್ ಮಜೂರ್ ವಿರುದ್ಧ 0-2 (9-21, 13-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಇದರೊಂದಿಗೆ ವಿಶ್ವ ನಂ.1 ಶ್ರೇಯಾಂಕದ ಸುಹಾಸ್ ಯತಿರಾಜ್ ಸತತ ಎರಡನೇ ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
2020 ರ ಟೋಕಿಯೋ ಒಲಿಂಪಿಕ್ಸ್ನಲ್ಲೂ ಸುಹಾಸ್ ಬೆಳ್ಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿ ಪದಕದ ಬಣ್ಣವನ್ನು ಚಿನ್ನವನ್ನಾಗಿ ಪರಿವರ್ತಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಫ್ರಾನ್ಸ್ನ ಲ್ಯೂಕಾಸ್ ಮಜೂರ್ ವಿರುದ್ಧ ಸುಹಾಸ್ಗೆ ಈ ಚಮತ್ಕಾರ ಮಾಡಲು ಸಾಧ್ಯವಾಗಲಿಲ್ಲ.

