ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಗಾನಿಸ್ತಾನ 50 ಓವರ್ಗಳಲ್ಲಿ 244 ರನ್ ಗಳಿಸಿ ಆಲ್ ಔಟ್ ಆಯಿತು.
245 ರನ್ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ರಸಿ ವ್ಯಾನ್ ಡೆರ್ ಅರ್ಧಶತಕದ (76) ನೆರವಿನಿಂದ 47.. ಓವರ್ ಗಳಲ್ಲಿ ಗೆಲುವಿನ ನಗೆ ಬೀರಿದೆ.