News Karnataka Kannada
Sunday, April 28 2024
ಕ್ರೀಡೆ

ದಕ್ಷಿಣ ಆಫ್ರಿಕಾ ವರ್ಸಸ್‌ ಇಂಗ್ಲೆಂಡ್‌: ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಗೆಲುವು

South Africa vs England: South Africa beat England by 7 wickets
Photo Credit : News Kannada

ಮುಂಬೈ: ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾ 229 ರನ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು ದಾಖಲಿಸಿರುವ ಹರಿಣಗಳ ಪಡೆ ಆರು ಅಂಕಗಳೊಂದಿಗೆ ಮೂರನೇ ಸ್ಥಾನ ಭದ್ರ ಮಾಡಿಕೊಂಡಿದೆ.

ಅತ್ತ ನಾಲ್ಕು ಪಂದ್ಯಗಳಲ್ಲಿ ಮೂರನೇ ಸೋಲಿಗೆ ಗುರಿಯಾಗಿರುವ ಆಂಗ್ಲರ ಪಡೆ ಎರಡು ಅಂಕಗಳೊಂದಿಗೆ ಒಂಭತ್ತನೇ ಸ್ಥಾನಕ್ಕೆ ಕುಸಿದಿದೆ. ಮುಂಬೈ ವಾಖಂಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾದ ಹೆನ್ರಿಚ್‌ ಕ್ಲಾಸೆನ್‌ ಅಮೋಘ ಶತಕ( 109) ಬೆಂಬಲದೊಂದಿಗೆ ಏಳು ವಿಕೆಟ್‌ ನಷ್ಟಕ್ಕೆ 399 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಬ್ಯಾಟಿಂಗ್‌ ನಲ್ಲಿ ಮುಗ್ಗರಿಸಿ 22 ಓವರ್‌ ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು