ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಶನಿವಾರದಿಂದ ಶುರುವಾಗಲಿದೆ. ಆದರೆ ಅದಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ವೇಗಿ ದುಷ್ಮಂತ ಚಮೀರಾ ಈ ಸರಣಿಯಿಂದ ಹೊರಗುಳಿದಿದ್ದಾರೆ.

ಇತ್ತೀಚೆಗೆ ಮುಗಿದ ಲಂಕಾ ಪ್ರೀಮಿಯರ್ ಲೀಗ್​ನ ಪಂದ್ಯದ ವೇಳೆ ಚಮೀರಾ ಗಾಯಗೊಂಡಿದ್ದರು. ಈ ಗಾಯದಿಂದ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಸರಣಿಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಇನ್ನು ಈ ಪಂದ್ಯಕ್ಕೆ ಬದಲಿ ಆಟಗಾರರನ್ನು ಟಿ20 ಸರಣಿ ಆರಂಭಕ್ಕೂ ಮುನ್ನವೇ ಪ್ರಕಟಿಸುವ ಸಾಧ್ಯತೆ ಇದೆ.