News Karnataka Kannada
Monday, April 29 2024
ಕ್ರೀಡೆ

ವಿಶ್ವಕಪ್ ಅಖಾಡದಲ್ಲಿ ಇಂದು ಶ್ರೀಲಂಕಾ- ಅಫ್ಘಾನ್ ಮುಖಾಮುಖಿ

Sri Lanka vs Afghanistan Icc Cricket World Cup 2019
Photo Credit : Twitter

ಪುಣೆ: ಏಕದಿನ ವಿಶ್ವಕಪ್‌ನಲ್ಲಿ ಇಂದು (ಅ.30) ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಹಾದಿ ಜೀವಂತವಾಗಿರಲಿದೆ.

ಇಲ್ಲಿಯವರೆಗೆ ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದಿದ್ದು, ತಲಾ ನಾಲ್ಕು ಅಂಕಗಳನ್ನು ಹೊಂದಿವೆ. ಆದರೆ ಉತ್ತಮ ನೆಟ್​ ರನ್ ರೇಟ್‌ನಿಂದಾಗಿ ಶ್ರೀಲಂಕಾ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನ ತಂಡ ಏಳನೇ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಿನ ಆರನೇ ಪಂದ್ಯ ಇದಾಗಿದ್ದು, ವಿಜೇತ ತಂಡವು ಒಟ್ಟು 6 ಅಂಕಗಳೊಂದಿಗೆ ಸೆಮಿಫೈನಲ್​ಗೆ ಇನ್ನಷ್ಟು ಹತ್ತಿರವಾಗಲಿದೆ. ಹಾಗೆಯೇ ಸೋತ ತಂಡಕ್ಕೆ ಸೆಮಿಸ್ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಶ್ರೀಲಂಕಾ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್) ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತಿಕ್ಷಣ, ಕಸುನ್ ರಜಿತಾ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಉಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ನೂರ್ ಅಹ್ಮದ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು