ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸುವುದರೊಂದಿಗೆ ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ತೀವ್ರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಅತಿಯಾದ ಆತ್ಮವಿಶ್ವಾಸ, ಕಳಪೆ ನಾಯಕತ್ವ, ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿದ್ದು ಹಾಗೂ ಕಳಪೆ ಬೌಲಿಂಗ್ ಟೀಂ ಇಂಡಿಯಾದ ಸೋಲಿಗೆ ಪ್ರಮುಖ ಕಾರಣವಾಯಿತು.

ಇಡೀ ಪಂದ್ಯದುದ್ದಕ್ಕೂ ಗೆಲುವಿಗಾಗಿ ಹೋರಾಡಿದ ಶ್ರೀಲಂಕಾ ತಂಡ, ಭಾರತ ಮತ್ತು ಬಾಂಗ್ಲಾದೇಶದ ನಂತರ ಏಷ್ಯಾಕಪ್ ಗೆದ್ದ ಮೂರನೇ ಮಹಿಳಾ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 6 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಲಂಕಾ 19ನೇ ಓವರ್​ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.