ಪುತ್ತೂರು: ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್‌ನಲ್ಲಿ ಅಕ್ಟೋಬರ್ 1ರಿಂದ 4ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ಗೆ ಅಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನ್ಯಾಕ್, ಕಾರ್ಯದರ್ಶಿ ಶ್ರೀ ಸಂಜಿತ್ ನ್ಯಾಕ್. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

