ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಜಾವೆಲಿನ್ ಥ್ರೋ ಫೈನಲ್ ನಲ್ಲಿ ಭಾರತದ ಸುಮಿತ್ ಅಂಟಿಲ್ ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಭಾರತದ ಅಥ್ಲೀಟ್ ಸುಮಿತ್ ಅಂಟಿಲ್ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲೂ ತಮ್ಮ ಅಧ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.
ಪುರುಷರ ಜಾವೆಲಿನ್ ಥ್ರೋ (ಎಫ್64 ವಿಭಾಗ)ದಲ್ಲಿ ಸುಮಿತ್ ಆಂಟಿಲ್ ತಮ್ಮ ಎರಡನೇ ಪ್ರಯತ್ನದಲ್ಲಿ ಜಾವೆಲಿನ್ ಅನ್ನು 70.59 ಮೀಟರ್ ಎಸೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಸುಮಿತ್ ಆಂಟಿಲ್ ಅವರ ಈ ಥ್ರೋ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲೇ (ಎಫ್ 64 ವಿಭಾಗ) ಅತ್ಯುತ್ತಮ ಥ್ರೋ ಆಗಿದೆ.

