Bengaluru 26°C
Ad

ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಸುಮಿತ್‌ ನಗಾಲ್‌

ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಇದೀಗ ಭಾರತದ ಟೆನಿಸ್‌ ಆಟಗಾರ ಸುಮಿತ್‌ ನಗಾಲ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದ್ದಾರೆ.

ನವದೆಹಲಿ: ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಇದೀಗ ಭಾರತದ ಟೆನಿಸ್‌ ಆಟಗಾರ ಸುಮಿತ್‌ ನಗಾಲ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದ್ದಾರೆ.

Ad
300x250 2

‘2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅಧಿಕೃತವಾಗಿ ಅರ್ಹತೆ ಪಡೆದಿದ್ದೇನೆ ಎಂದು ತಿಳಿಸಲು ಸಂತಸವಾಗುತ್ತಿದೆ. ನನ್ನ ಪಾಲಿಗೆ ಇದು ಅವಿಸ್ಮರಣೀಯ ಕ್ಷಣ’ ಎಂದು ನಗಾಲ್​ ಟ್ವೀಟ್​ ಮಾಡಿ ತಮಗೆ ಒಲಿಂಪಿಕ್ಸ್​ ಅರ್ಹತೆ ಪಡೆದ ವಿಚಾರವನ್ನು ಖಚಿತಪಡಿಸಿದ್ದಾರೆ.

26 ವರ್ಷದ ನಗಾಲ್‌ ಅವರಿಗೆ ಇದು ಎರಡನೇ ಒಲಿಂಪಿಕ್‌ ಕೂಟವಾಗಿದೆ. 2020ರ ಟೋಕಿಯೊ ಟೂರ್ನಿಯಲ್ಲಿಯೂ ಅವರು ಕಣಕ್ಕಿಳಿದ್ದರು. ಅಲ್ಲಿ ಅವರು, ಅಲ್ಲಿ ಎರಡನೇ ಸುತ್ತು ಪ್ರವೇಶಿಸಿದ್ದರು.

ಜೂನ್‌ 10ರ ವರೆಗಿನ ಐಟಿಎಫ್‌ ರ‍್ಯಾಂಕಿಂಗ್‌ ಆಧಾರದಲ್ಲಿ ನಗಾಲ್‌ ಅವರಿಗೆ ಒಲಿಂಪಿಕ್ಸ್‌ಗೆ ಅರ್ಹತೆ ದೊರಕಲಿದೆ ಎಂದು ಅಖಿಲ ಭಾರತ ಟೆನಿಸ್ ಸಂಸ್ಥೆ  ಹೇಳಿತ್ತು. ಇದೀಗ ಅಧಿಕೃತಗೊಂಡಿದೆ.

ಟೆನಿಸ್‌ ಸ್ಪರ್ಧೆಯ ಪುರುಷರ ಡಬಲ್ಸ್​ನಲ್ಲಿ ಎನ್‌. ಶ್ರೀರಾಮ್‌ ಬಾಲಾಜಿ ಅವರು ಕನ್ನಡಿಗ ರೋಹನ್‌ ಬೋಪಣ್ಣ ಜತೆ ಆಡಲಿದ್ದಾರೆ. 44 ವರ್ಷದ ಬೋಪಣ್ಣ ಜನವರಿಯಲ್ಲಿ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲಾಮ್ ಗೆದ್ದು ಕಳೆದ ವಾರ ಫ್ರೆಂಚ್ ಓಪನ್‌ನಲ್ಲಿ ಸೆಮಿಫೈನಲ್ ತಲುಪಿದ್ದರು. ಬೋಪಣ್ಣ ಲಂಡನ್ 2012 ಗೇಮ್ಸ್ ಮತ್ತು ರಿಯೊ 2016 ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಕಳೆದುಕೊಂಡಿದ್ದರು.

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

 

 

 

 

 

Ad
Ad
Nk Channel Final 21 09 2023
Ad