Categories: ಕ್ರೀಡೆ

ಮುಂಬೈ ಇಂಡಿಯನ್ಸ್ ಗೆ 278 ರನ್​ಗಳ ಬೃಹತ್​ ಟಾರ್ಗೆಟ್​ ನೀಡಿದ ಸನ್​ರೈಸರ್ಸ್​ ಹೈದರಾಬಾದ್

ಹೈದರಾಬಾದ್‌: ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ಮುಂಬೈ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಇಡೀ ಐಪಿಎಲ್​ ಇತಿಹಾಸದಲ್ಲಿ ಅತ್ಯಂತ ಅಧಿಕ ರನ್​ ಗಳಿಸಿ ದಾಖಲೆ ಬರೆದಿದೆ.

ಟಾಸ್​ ಗೆದ್ದುಕೊಂಡ ಮುಂಬೈ ಇಂಡಿಯನ್ಸ್​ ಕ್ಯಾಪ್ಟನ್​ ಹಾರ್ದಿಕ್​ ಪಾಂಡ್ಯ ಬೌಲಿಂಗ್​ ಆಯ್ಕೆ ಮಾಡಿಕೊಂಡರು.  ಸನ್​ರೈಸರ್ಸ್​ ಹೈದರಾಬಾದ್​​​ ಮೊದಲು ಬ್ಯಾಟಿಂಗ್​ ಮಾಡಿ ನಿಗದಿತ 20 ಓವರ್​ಗಳಲ್ಲಿ 278 ರನ್​ಗಳ ಬೃಹತ್​ ಟಾರ್ಗೆಟ್​ ಅನ್ನು ಮುಂಬೈಗೆ ನೀಡಿದೆ.

ಬೌಲರ್​ಗಳ ಬೆಂಡೆತ್ತಿದ ಟ್ರಾವೀಸ್​ ಹೆಡ್​​ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಕೇವಲ 24 ಬಾಲ್​ನಲ್ಲಿ 3 ಸಿಕ್ಸರ್​​, 9 ಫೋರ್​​ ಸಮೇತ 64 ರನ್​​ ಸಿಡಿಸಿ ದಾಖಲೆ ಬರೆದರು. ಓಪನರ್​​​ ಟ್ರಾವಿಸ್​ ಹೆಡ್​ಗೆ ಸಾಥ್​ ನೀಡಿದ ಅಭಿಶೇಕ್​ ಶರ್ಮಾ ಮೊದಲು ಕೇವಲ 16 ಬಾಲ್​ನಲ್ಲಿ ಅರ್ಧಶತಕ ಸಿಡಿಸಿದ್ರು. ಬಳಿಕ ತಾನು ಆಡಿದ 23 ಬಾಲ್​ನಲ್ಲಿ 7 ಸಿಕ್ಸರ್​​, 3 ಫೋರ್​ ಸಮೇತ 63 ರನ್​ ಚಚ್ಚಿ ಕ್ಯಾಚ್​ ನೀಡಿದ್ರು.

ಏಡನ್​ ಮರ್ಕ್ರಮ್​​ ಮತ್ತು ಹೆನ್ರಿಕ್​ ಕ್ಲಾಸೆನ್​ ಕೂಡ ಭರ್ಜರಿ ಬ್ಯಾಟಿಂಗ್​ ಮಾಡಿದ್ದಾರೆ. ಹೆನ್ರಿಕ್​ ಕ್ಲಾಸೆನ್ ಅಂತೂ ರೌದ್ರವಾತಾರ ತಾಳಿದರು. ಕೇವಲ 34 ಎಸೆತ ಎದುರಿಸಿದ ಕ್ಲಾಸೆನ್ 4 ಫೋರ್, 7 ಅಮೋಘವಾದ ಸಿಕ್ಸರ್ ನೆರವಿನಿಂದ 80 ರನ್​ಗಳನ್ನ ಬಾರಿಸಿದರು. ಮಾರ್ಕರಮ್ ಕೂಡ 28 ಎಸೆತದಲ್ಲಿ 1 ಸಿಕ್ಸ್​, 2 ಫೋರ್​ನಿಂದ 42 ರನ್​ಗಳನ್ನು ಕೆಲಹಾಕಿದರು.

ಇದರಿಂದ ಹೈದರಾಬಾದ್ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 278 ರನ್​ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ.

Ashika S

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

11 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

16 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

42 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

45 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

58 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago