ಪ್ಯಾರಿಸ್: ಪೋಲೆಂಡ್‌ನ ಇಗಾ ಸ್ವಿಯಾಟೆಕ್ ಅವರು ಫ್ರೆಂಚ್ ಓಪನ್ ಟೂರ್ನಿಯಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು(ಶನಿವಾರ) ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಜಾಸ್ಮಿನ್ ಪಾವೊಲಿನಿ ವಿರುದ್ಧ ಅಧಿಕಾರಯು ಗೆಲುವು ಸಾಧಿಸಿ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಆವೇ ಅಂಗಣದ ಕೂಟದಲ್ಲಿ 4ನೇ ಹಾಗೂ ಹ್ಯಾಟ್ರಿಕ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು. ಒಟ್ಟಾರೆಯಾಗಿ ಇದು ಸ್ವಿಯಾಟೆಕ್ಗೆ 5ನೇ ಗ್ರ್ಯಾನ್ ಸ್ಲಾಮ್ ಕಿರೀಟ. ಒಂದು ಟ್ರೋಫಿ ಯುಎಸ್ ಓಪನ್ನಲ್ಲಿ ಒಲಿದಿತ್ತು.
6-2, 6-1 ನೇರ ಸೆಟ್ಗಳ ಹೀನಾಯ ಸೋಲು ಕಂಡರು. ಕೇವಲ 68 ನಿಮಿಷದಲ್ಲಿ ಈ ಪಂದ್ಯ ಮುಕ್ತಾಯ ಕಂಡಿತು. ಸ್ವಿಯಾಟೆಕ್ ರೋಲ್ಯಾಂಡ್ ಗ್ಯಾರಸ್ನಲ್ಲಿ ಸತತ 21 ಪಂದ್ಯಗಳ ಅಜೇಯ ಓಟ ಮುಂದುವರಿಸಿ ಪಾರಮ್ಯ ಮೆರದರು.

