Categories: ಕ್ರೀಡೆ

ಬಾಂಗ್ಲಾದೇಶದ ವಿರುದ್ಧ ಗೆದ್ದ ಪಾಕಿಸ್ಥಾನ ತಂಡ: ಟಿ20 ವಿಶ್ವಕಪ್ 2022ರ ಸೆಮಿ ಫೈನಲ್ ಗೆ ಪ್ರವೇಶ

ಅಡಿಲೇಡ್: ಬಾಂಗ್ಲಾದೇಶದ ವಿರುದ್ಧ ಗೆದ್ದ ಪಾಕಿಸ್ಥಾನ ತಂಡವು ಟಿ20 ವಿಶ್ವಕಪ್ 2022ರ ಸೆಮಿ ಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋತ ಕಾರಣ ಈ ಪಂದ್ಯ ಹೆಚ್ಚಿನ ಮಹತ್ವ ಪಡೆದಿತ್ತು. ಈ ಪಂದ್ಯದಲ್ಲಿ ಗೆದ್ದವರು ಸೆಮಿ ಫೈನಲ್ ಅರ್ಹತೆ ಪಡೆಯಲಿದ್ದರು. ಇದರಲ್ಲಿ ಉತ್ತೀರ್ಣರಾದ ಬಾಬಾರ್ ಪಡೆ ಸೆಮಿಗೆ ಎಂಟ್ರಿ ನೀಡಿದೆ.

ಅಡಿಲೇಡ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದರೆ, ಪಾಕಿಸ್ಥಾನವು 18.1 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಬಾಂಗ್ಲಾಗೆ ಶಾಂಟೋ ಅರ್ಧಶತಕ ಬಾರಿಸಿ ನೆರವಾದರು. ಅತಿಫ್ ಹುಸೈನ್ 24 ರನ್ ಮತ್ತು ಸೌಮ್ಯ ಸರ್ಕಾರ್ 20 ರನ್ ಗಳಿಸಿದರು. ಶಕೀಬ್ ವಿವಾದಾತ್ಮಕ ರೀತಿಯಲ್ಲಿ ಔಟಾದರು. ಪಾಕ್ ಪರ ಶಹೀನ್ ಅಫ್ರಿದಿ ನಾಲ್ಕು ವಿಕೆಟ್ ಕಿತ್ತರೆ, ಎರಡು ವಿಕೆಟ್ ಶದಾಬ್ ಪಾಲಾಯಿತು.

ಗುರಿ ಬೆನ್ನತ್ತಿದ ಪಾಕ್ ಗೆ ಉತ್ತಮ ಆರಂಭ ದೊರಕಿತು. ರಿಜ್ವಾನ್ 32 ಮತ್ತು ಬಾಬರ್ 25 ರನ್ ಮಾಡಿದರು. ಹ್ಯಾರಿಸ್ 31 ಮತ್ತು ಶಾನ್ ಮಸೂದ್ ಅಜೇಯ 24 ರನ್ ಗಳಿಸಿದರು.

ಕಳಪೆ ಫೀಲ್ಡಿಂಗ್ ಗೆ ಬೆಲೆ ತೆತ್ತ ಬಾಂಗ್ಲಾದೇಶವು ಐದು ವಿಕೆಟ್ ಗಳ ಸೋಲನುಭವಿಸಿತು. ಅದೃಷ್ಟದ ಬಲದ ಮೇಲೆ ಪಾಕಿಸ್ಥಾನ ಸೆಮಿ ಫೈನಲ್ ಪ್ರವೇಶ ಪಡೆಯಿತು. ಸೆಮಿ ಫೈನಲ್ ನಲ್ಲಿ ಪಾಕಿಸ್ಥಾನವು ಬಹುತೇಕ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

50 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago