Bengaluru 23°C
Ad

ಗೆಲುವಿನೊಂದಿಗೆ ಟಿ20 ವಿಶ್ವಕಪ್​ಗೆ ಗುಡ್​ ಬೈ ಹೇಳಿದ ಪಾಕಿಸ್ತಾನ

Pak

ನವದೆಹಲಿ: ಟಿ20 ವಿಶ್ವಕಪ್​ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾನ ತಂಡ, ಐರ್ಲೆಂಡ್ ತಂಡವನ್ನು 3 ವಿಕೆಟ್​ಗಳಿಂದ ಮಣಿಸಿದೆ.

ಇದರೊಂದಿಗೆ ತನ್ನ ಟಿ20 ವಿಶ್ವಕಪ್ ಪಯಣವನ್ನು ಮುಗಿಸಿದೆ. ವಾಸ್ತವವಾಗಿ ಲೀಗ್​ ಸುತ್ತಿನ ಮೊದಲ ಎರಡು ಪಂದ್ಯಗಳನ್ನು ಸೋತಿದ್ದ ಪಾಕಿಸ್ತಾನ ತಂಡ ಆರಂಭದಲ್ಲೇ ಟಿ20 ವಿಶ್ವಕಪ್​ನಿಂದ ಹೊರಬಿದ್ದಿತ್ತು. ಹೀಗಾಗಿ ಇಂದು ಔಪಾಚಾರಿಕ ಪಂದ್ಯವನ್ನಾಡಿದ ಬಾಬರ್ ಪಡೆ, ಈ ಪಂದ್ಯದಲ್ಲೂ ಪ್ರಯಾಸದ ಗೆಲುವು ದಾಖಲಿಸಿದೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 19ನೇ ಓವರ್​​ನಲ್ಲಿ ಗೆಲುವಿನ ದಡ ಮುಟ್ಟಿತು.

ತಂಡದ ಪರ ನಾಯಕ ಬಾಬರ್ 34 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 32 ರನ್ ಗಳಿಸಿ ಅಜೇಯರಾಗಿ ಉಳಿದರು. ಅದೇ ಸಮಯದಲ್ಲಿ, ಶಾಹೀನ್ ಅಫ್ರಿದಿ ಐದು ಎಸೆತಗಳಲ್ಲಿ ಎರಡು ಸಿಕ್ಸರ್‌ಗಳ ಸಹಾಯದಿಂದ 13 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಅಬ್ಬಾಸ್ 21 ಎಸೆತಗಳಲ್ಲಿ 17 ರನ್ ಬಾರಿಸಿದರು. ಈ ಗೆಲುವಿನೊಂದಿಗೆ ಪಾಕಿಸ್ತಾನ ತಂಡ ಎ ಗುಂಪಿನಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಭಾರತ ಮತ್ತು ಅಮೆರಿಕ ತಂಡಗಳು ಎ ಗುಂಪಿನಿಂದ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿವೆ.

Ad
Ad
Nk Channel Final 21 09 2023
Ad