ಅಹಮದಾಬಾದ್: 2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಭಾರತ ಹಾಗೂ ಕಿವೀಸ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.

