Bengaluru 29°C
Ad

ಟಿ20 ವಿಶ್ವಕಪ್: ನ್ಯೂಝಿಲೆಂಡ್ ವಿರುದ್ಧ ಅಫ್ಘಾನಿಸ್ತಾನಕ್ಕೆ ಭರ್ಜರಿ ಜಯ

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಅಮೋಘ ಜಯ ಸಾಧಿಸಿದೆ.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಅಫ್ಘಾನಿಸ್ತಾನ್ ತಂಡ ಅಮೋಘ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ಉತ್ತಮ ಆರಂಭ ಪಡೆದುಕೊಂಡಿತು.

ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝದ್ರನ್ ಮೊದಲ ವಿಕೆಟ್​ಗೆ 103 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಈ ಹಂತದಲ್ಲಿ ಮ್ಯಾಟ್ ಹೆನ್ರಿ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿ ಇಬ್ರಾಹಿಂ ಝದ್ರಾನ್ (44) ಕ್ಲೀನ್ ಬೌಲ್ಡ್ ಆದರು.

ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರಹಮಾನುಲ್ಲ ಗುರ್ಬಾಝ್ 56 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 80 ರನ್ ಸಿಡಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು.

160 ರನ್​ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಎಡಗೈ ವೇಗಿ ಫಝಲ್ಹಕ್ ಫಾರೂಖಿ ಯಶಸ್ವಿಯಾದರು. ಮೊದಲ ಓವರ್​ನ ಮೊದಲ ಎಸೆತದಲ್ಲೇ ಫಿನ್ ಅಲೆನ್ (0) ರನ್ನು ಕ್ಲೀನ್ ಬೌಲ್ಡ್ ಮಾಡಿದ ಫಾರೂಖಿ 3ನೇ ಓವರ್​ನಲ್ಲಿ ಡೆವೊನ್ ಕಾನ್ವೆ (8) ವಿಕೆಟ್ ಪಡೆದರು.

ಅಂತಿಮವಾಗಿ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡವು 84 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

Ad
Ad
Nk Channel Final 21 09 2023
Ad