Bengaluru 24°C
Ad

ಟಿ20 ವಿಶ್ವಕಪ್: ಸಂಜು ಸ್ಯಾಮ್ಸನ್‌ಗಿಂತ ರಿಷಭ್​ ಪಂತ್ ರನ್ನು ಆಯ್ಕೆ ಮಾಡುತ್ತೇನೆ ಎಂದ ಯುವರಾಜ್​ ಸಿಂಗ್

ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂಬ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್ ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ. 

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂಬ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್ ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಐಸಿಸಿ​ ಸಂದರ್ಶವೊಂದರಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ನಾನು ಸಂಜು ಸ್ಯಾಮ್ಸನ್‌ಗಿಂತ ರಿಷಭ್​ ಪಂತ್ ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ.

ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಹೇಳಿದರು.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್​ ಪಂತ್​ ಅವರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು.

ಪಂತ್​ ದೀರ್ಘಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಕೂಡ ಅವರ ಪ್ರದರ್ಶನದಲ್ಲಿ ಯಾವುದೇ ವ್ಯತ್ಯಾಸ ಮಾತ್ರ ಕಂಡುಬಂದಿರಲಿಲ್ಲ. ಹಳೆಯ ಫಾರ್ಮ್​ನಂತೆ ಪ್ರದರ್ಶನ ತೋರಿದ್ದರು. ಹೀಗಾಗಿ ಯುವರಾಜ್​ ಕೂಡ ಪಂತ್​ರನ್ನು ಟಿ20ಯಲ್ಲಿ ಆಡಿಸಬೇಕು ಎಂದು ಹೇಳಿದ್ದಾರೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ.

ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad