Ad

ಇಂದು ಕೋವೈ ಕಿಂಗ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ ಮುಖಾಮುಖಿ

ತಮಿಳುನಾಡು ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ತಮಿಳುನಾಡು ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಈ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆಯಲಿದ್ದು, ಈ ಮೂಲಕ ಬಲಿಷ್ಠ ಎರಡು ತಂಡಗಳು ಟ್ರೋಫಿಗಾಗಿ ಸೆಣಸಲಿದೆ. ಇದಕ್ಕೂ ಮುನ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಐಡಿರೀಮ್ ತಿರುಪ್ಪೂರ್ ತಮಿಳನ್ಸ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಲೈಕಾ ಕೋವೈ ಕಿಂಗ್ಸ್ ಫೈನಲ್​ಗೆ ಪ್ರವೇಶಿಸಿತ್ತು.

ಹಾಗೆಯೇ ಚೆಪಾಕ್ ಸೂಪರ್ ಗಿಲ್ಲೀಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 4 ವಿಕೆಟ್​ಗಳ ಜಯ ಸಾಧಿಸಿದ ದಿಂಡಿಗಲ್ ಡ್ರಾಗನ್ಸ್ ತಂಡವು ಎರಡನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿತು. ಅದರಂತೆ ಕ್ವಾಲಿಫೈಯರ್-2 ಪಂದ್ಯದಲ್ಲಿ ತಿರುಪ್ಪೂರ್ ತಮಿಳನ್ಸ್ ತಂಡವನ್ನು 9 ಮಣಿಸಿ ರವಿಚಂದ್ರನ್ ಅಶ್ವಿನ್ ನಾಯಕತ್ವದ ದಿಂಡಿಗಲ್ ಡ್ರಾಗನ್ಸ್ ತಂಡವು ಫೈನಲ್​ ನಲ್ಲಿದೆ.

Ad
Ad
Nk Channel Final 21 09 2023