News Karnataka Kannada
Friday, May 10 2024
ಕ್ರೀಡೆ

ನರೇಂದ್ರ ಮೋದಿ ಸ್ಟೇಡಿಯಂ ತಲುಪಿದ ಟೀಮ್ ಇಂಡಿಯಾ ಆಟಗಾರರು

Ah M Ind
Photo Credit : Twitter

ಅಹ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ರೋಹಿತ್ ಶರ್ಮಾ ನಾಯಕತ್ವ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ನಡುವೆ ಪ್ರಶಸ್ತಿಗಾಗಿ ಅಂತಿಮ ಕಾದಾಟ ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ಆಯೋಜನೆ ಮಾಡಲಿದೆ.

ಟೀಮ್ ಇಂಡಿಯಾಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಭಾರತದ ಕ್ರಿಕೆಟ್ ದಿಗ್ಗಜರು, ಟೀಮ್ ಇಂಡಿಯಾ ಆಟಗಾರರ ಕುಟುಂಬದವರು, ಬಾಲಿವುಡ್, ಸ್ಯಾಂಡಲ್​ವುಡ್ ನಟ-ನಟಿಯರು ಭಾರತ ಗೆಲ್ಲಲಿ ಎಂದು ಶುಭಕೋರಿದ್ದಾರೆ.

ಫೈನಲ್ ಪಂದ್ಯಕ್ಕಾಗಿ ಪ್ರೇಕ್ಷಕರು ತುಂಬಾ ಉತ್ಸುಕರಾಗಿದ್ದಾರೆ. ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ನರೇಂದ್ರ ಮೋದಿ ಸ್ಟೇಡಿಯಂ ಎದುರು 1 ಲಕ್ಷಕ್ಕೂ ಅಧಿಕ ಮಂದಿ ಬಂದಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ. ಇತ್ತ ಭಾರತ ತಂಡ ಕೂಡ ನರೆಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಿದೆ. ಇದರ ವಿಡಿಯೋ ಕೂಡ ವೈರಲ್ ಆಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು