ಇಂದು ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ. ಟಾಸ್ ಗೆದ್ದ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಟೀಮ್ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ.
ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಕೇವಲ 127 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 11.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತ್ತು.
ಇತ್ತ 2ನೇ ಟಿ20 ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ಟೀಮ್ ಇಂಡಿಯಾ ಪ್ರಯತ್ನಿಸುತ್ತಿದೆ. ಅತ್ತ ಬಾಂಗ್ಲಾದೇಶ ಈ ಪಂದ್ಯ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಲು ಬಯಸುತ್ತಿದೆ. ಟಾಸ್ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 2ನೇ ಟಿ20 ಪಂದ್ಯದಲ್ಲೂ ಅದೇ ತಂಡ ಇರಲಿದೆ ಎಂದರು.
Ad