Ad

ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ

2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೂಪರ್‌-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 47 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಬಾರ್ಬಡೋಸ್‌: 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೂಪರ್‌-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 47 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Ad
300x250 2

ಈ ಗೆಲುವಿನೊಂದಿಗೆ ನಾಯಕ ರೋಹಿತ್‌ ಶರ್ಮಾ ಅವರ ಹೆಗಲಿಗೆ ಮತ್ತೊಂದು ವಿಶೇಷ ಸಾಧನೆಯೂ ಸೇರ್ಪಡೆಯಾಗಿದೆ. ನಿಯಮಿತ ಓವರ್‌ಗಳ ಐಸಿಸಿ ಪಂದ್ಯಗಳಲ್ಲಿ ಅತಿಹೆಚ್ಚು ಗೆಲುವು ಸಾಧಿಸಿದ ಟೀಂ ಇಂಡಿಯಾ ನಾಯಕ ಸಹ ಎನಿಸಿಕೊಂಡಿದ್ದಾರೆ.

21 ಪಂದ್ಯಗಳ ಪೈಕಿ ರೋಹಿತ್‌ ನಾಯಕತ್ವದಲ್ಲಿ ಭಾರತ 18ರಲ್ಲಿ ಗೆಲುವು ಸಾಧಿಸಿದ್ದು, ಕೇವಲ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಗುರುವಾರ ಇಲ್ಲಿನ ಬಾರ್ಬಡೋಸ್‌ನ ಕೆನ್ಸಿಂಗ್ಟನ್‌ ಓವಲ್ ಕ್ರೀಡಾಂಗಣದಲ್ಲಿ ಭಾರತ ನೀಡಿದ್ದ 182 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ, ಬುಮ್ರಾ ಹಾಗೂ ಅರ್ಷ್‌ದೀಪ್‌ ಸಿಂಗ್‌ ಮಾರಕ ಬೌಲಿಂಗ್‌ ದಾಳಿಗೆ ನಲುಗಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ಆ ಮೂಲಕ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 134 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಚೇಸಿಂಗ್‌ ಆರಂಭಿಸಿದ ಅಫ್ಘಾನ್‌ ತಂಡ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. ಅಝಮತ್‌ವುಲ್ಲಾ ಒಮರ್ಜಾಯ್‌ ಅವರನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ಬ್ಯಾಟ್ಸ್‌ಮನ್‌ ವೈಯಕ್ತಿಕ 20 ರನ್‌ಗಳ ಗಡಿಯನ್ನು ದಾಟುವಲ್ಲಿ ವಿಫಲರಾದರು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಭಾರತ ತಂಡ, 20 ಓವರ್‌ಗಳಿಗೆ 8 ವಿಕೆಟ್‌ ನಷ್ಟಕ್ಕೆ 181 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಅಫ್ಘಾನಿಸ್ತಾನ ತಂಡಕ್ಕೆ 182 ರನ್‌ಗಳ ಗುರಿ ನೀಡಿತ್ತು. ಭಾರತದ ಪರ ಸೂರ್ಯಕುಮಾರ್‌ 53 ರನ್‌, ಹಾರ್ದಿಕ್‌ ಪಾಂಡ್ಯ 32 ರನ್‌ ಗಳಿಸಿದ್ದರು.

 

Ad
Ad
Nk Channel Final 21 09 2023
Ad