Bengaluru 22°C
Ad

ಟಾಸ್ ಗೆದ್ದ ಟೀಂ ಇಂಡಿಯಾ: ಬ್ಯಾಟಿಂಗ್ ಮಾಡಲಿರುವ ಬಾಂಗ್ಲಾ

ಭಾರತ ಮತ್ತು ಬಾಂಗ್ಲಾದೇಶ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿತು.

ಭಾರತ ಮತ್ತು ಬಾಂಗ್ಲಾದೇಶ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿತು. ಇದೀಗ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ.

ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಿದೆ. ಹೀಗಾಗಿ 1 ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದ್ದು, ಟಾಸ್ ಕೂಡ ತಡವಾಗಿ ನಡೆದಿದೆ. ಅದರಂತೆ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಅದರಂತೆ ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಹಾಗೆಯೇ ಟಾಸ್ ಜೊತೆಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಚೆನ್ನೈನಲ್ಲಿ ಕಣಕ್ಕಿಳಿಸಿದ್ದ ತಂಡವನ್ನೇ ರೋಹಿತ್ ಕಣಕ್ಕಿಳಿಸುತ್ತಿದ್ದರೆ, ಇತ್ತ ಬಾಂಗ್ಲಾದೇಶ ತಂಡದಲ್ಲಿ 2 ಬದಲಾವಣೆಗಳಾಗಿವೆ.

Ad
Ad
Nk Channel Final 21 09 2023