ಬಾರ್ಬಡೋಸ್​: ಈನ ಬಾರಿಯ ಟಿ 20 ವಿಶ್ವಕಪ್‌ ಚಾಂಪಿಯನ್‌ ಭಾರತ ತಂಡ ಬಾರ್ಬಡೋಸ್​ನಿಂದ ತವರಿಗೆ ಪ್ರಯಾಣ ಬೆಳೆಸಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬುಧವಾರ ಖಚಿತಪಡಿಸಿದೆ. ಟಿ20 ವಿಶ್ವಕಪ್​ ಟ್ರೋಫಿಯ ವಿಡಿಯೊ ಹಾಕಿ ನಾವು ಮರಳುತ್ತಿದ್ದೇವೆ ಎಂದು ಬರೆದುಕೊಂಡಿದೆ. ಬುಧವಾರ ಬಾರ್ಬಡೋಸ್​ನಿಂದ ಹೊರಡಿರುವ ಟೀಮ್​ ಇಂಡಿಯಾ ಗುರುವಾರ ಬೆಳಗ್ಗೆ ನವದೆಹಲಿಗೆ ತಲುಪಲಿದ್ದಾರೆ ಎಂದು ವರದಿಯಾಗಿದೆ.

ವಿಶ್ವಕಪ್‌ ಮುಗಿಯುತ್ತಿದ್ದಂತೆ ಬೆರಿಲ್ ಚಂಡಮಾರುತ ಅಬ್ಬರ ಶುರುವಾಗಿತ್ತು. ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

ಸದ್ಯ ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ