ಬೆಂಗಳೂರು: ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ 43ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಫಘಾನಿಸ್ತಾನ ವಿರುದ್ಧ ಆಡುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ಮೊದಲ ಸೂಪರ್ 8 ಪಂದ್ಯವಾಗಿದೆ.
ಭಾರತದ ಆಟಗಾರರು ಈ ಪಂದ್ಯಕ್ಕೆ ತೋಳುಗಳಲ್ಲಿ ಕಪ್ಪು ಪಟ್ಟಿ ಧರಿಸಿ ಆಡಲು ಇಳಿದಿದ್ದರು. ಯಾಕೆಂದರೆ ಗುರುವಾರ (ಜೂನ್ 20) ಕಟ್ಟಡದಿಂದ ಬಿದ್ದು ಮೃತಪಟ್ಟ ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ಅವರ ನೆನಪಿಗಾಗಿ ಕಪ್ಪು ಪಟ್ಟಿ ಧರಿಸಿದ್ದರು.ಜಾನ್ಸನ್ 1996 ರಲ್ಲಿ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದರು ಮತ್ತು ಅತ್ಯಂತ ವೇಗವಾಗಿ ಬೌಲಿಂಗ್ ಮಾಡುವ ಸಾಮರ್ಥ್ಯದಿಂದ ಹೆಸರು ಮಾಡಿದ್ದರು.
ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹೀಗಾಗಿ ಡೇವಿಡ್ ಜಾನ್ಸನ್ ಅವರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ ಭಾರತದ ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ವರದಿಗಳ ಪ್ರಕಾರ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿ

