ಟಿ20 ವಿಶ್ವಕಪ್‌ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಬದ್ಧವೈರಿಗಳ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಭಾನುವಾರ (ಇಂದು) ಕೊಲಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣ ಆತಿಥ್ಯ ವಹಿಸಲಿದ್ದು, ಈ ಪಂದ್ಯವನ್ನ ಕಣ್ತುಂಬಿಕೊಳ್ಳಲು ಕೋಟ್ಯಂತರ ಕ್ರೀಡಾಭಿಮಾನಿಗಳು ಕಾದು ಕುಳಿತಿದ್ದಾರೆ. ಸಂಜೆ 7 ಗಂಟೆಗೆ ಪಂದ್ಯ ಶುರುವಾಗಲಿದೆ.

ಭಾರತ ಮತ್ತು ಪಾಕಿಸ್ತಾನ ಈವರೆಗೆ 16 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 13 ರಲ್ಲಿ ಹಾಗೂ ಪಾಕಿಸ್ತಾನ 3 ಪಂದ್ಯಗಳಲ್ಲಿ ಗೆದ್ದಿದೆ. ಇನ್ನೂ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 8 ಬಾರಿ ಮುಖಾಮುಖಿಯಾಗಿದ್ದು, ಭಾರತ 7 ಬಾರಿ, ಪಾಕಿಸ್ತಾನ 1 ಬಾರಿ ಗೆದ್ದಿದೆ. 2021 ರಲ್ಲಿ ಪಾಕಿಸ್ತಾನ ಕೊನೇ ಬಾರಿಗೆ 10 ವಿಕೆಟ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು.