News Karnataka Kannada
Saturday, April 20 2024
Cricket
ಕ್ರೀಡೆ

ತಮಿಳುನಾಡು ಪ್ರೀಮಿಯರ್ ಲೀಗ್: ಚಾಂಪಿಯನ್ ಪಟ್ಟಕ್ಕೇರಿದ ಲೈಕಾ ಕೋವೈ ಕಿಂಗ್ಸ್

TNPL 2023 Final
Photo Credit : Twitter

ತಮಿಳುನಾಡು ಪ್ರೀಮಿಯರ್ ಲೀಗ್ ಪಂದ್ಯಾವಳಿ ಫೈನಲ್ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ತಂಡವನ್ನು 104 ರನ್​ಗಳಿಂದ ಮಣಿಸಿದ ಲೈಕಾ ಕೋವೈ ಕಿಂಗ್ಸ್ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಕೋವೈ ಕಿಂಗ್ಸ್‌ನ ಈ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕ ಶಾರುಖ್ ಖಾನ್ ಪ್ರಮುಖ ಮೂರು ವಿಕೆಟ್ ಉರುಳಿಸಿ ನೆಲ್ಲೈ ರಾಯಲ್ ಕಿಂಗ್ಸ್ ತಂಡ ಕೇವಲ 101 ರನ್​ಗಳಿಗೆ ಆಲೌಟ್ ಆಗುವಂತೆ ಮಾಡಿದರು.

ಇಡೀ ಪಂದ್ಯಾವಳಿಯಲ್ಲಿ ಬಲಿಷ್ಠ ತಂಡಗಳೆನಿಸಿಕೊಂಡಿದ್ದ ಕೋವೈ ಕಿಂಗ್ಸ್ ಮತ್ತು ರಾಯಲ್ ಕಿಂಗ್ಸ್ ತಂಡಗಳು ನಿರೀಕ್ಷೆಯಂತೆ ಫೈನಲ್​ಗೆ ಲಗ್ಗೆ ಇಟ್ಟಿದ್ದವು. ಹೀಗಿರುವಾಗ ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ಸಾಕಷ್ಟು ರೋಚಕತೆ ಹುಟ್ಟಿಸಿತ್ತು. ಆದರೆ ಲೈಕಾ ಕೋವೈ ಕಿಂಗ್ಸ್ ತಂಡದ ಮಾರಕ ಬೌಲಿಂಗ್​ಗೆ ಧೂಳಿಪಟವಾದ ನೆಲ್ಲೈ ರಾಯಲ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶಾರುಖ್ ಖಾನ್ ನೇತೃತ್ವದ ಲೈಕಾ ಕೋವೈ ಕಿಂಗ್ಸ್ ತಂಡ ನಿಗದಿತ 20 ಓವರ್​ಗಳಿಗೆ ಐದು ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು. 205 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ತಂಡ ಕೇವಲ 101 ರನ್​ಗಳಿಗೆ ಆಲೌಟ್ ಆಗಿ, 104 ರನ್​ಗಳ ಹೀನಾಯ ಸೋಲು ಕಂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು