ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಏಕದಿನ ಪಂದ್ಯವನ್ನು ಇಂದು ಆಯೋಜಿಸಲಾಗಿದೆ. ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ 5 ವಿಕೆಟ್ಗಳ ಜಯ ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಇಂದಿನ ಪಂದ್ಯವನ್ನು ರಾಹುಲ್ ಪಡೆ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಕಾಂಗರೂ ಪಡೆ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ.
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.