ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 17ನೇ ಸೀಸನ್ನ 10ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಎರಡೂ ತಂಡಗಳ ವೋಲ್ಟೇಜ್ ಪಂದ್ಯ ನಡೆಯಲಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿನೊಂದಿಗೆ ಹಳೆ ಟ್ರ್ಯಾಕ್ಗೆ ಮರಳಿದೆ. ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಈ ಬಿಗ್ ಫೈಟ್ ಮೇಲೆ ಎಲ್ಲರ ನಿರೀಕ್ಷೆಯಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿ 6ನೇ ಸ್ಥಾನದಲ್ಲಿದೆ.
ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವು ದರಿಂದ ಭಾರೀ ಪ್ರಮಾಣದ ರನ್ ಹರಿದು ಬರುವುದು ಸಾಮಾನ್ಯ. ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ದೊಡ್ಡ ಮೊತ್ತ ಪೇರಿಸುವ ಸವಾಲಿರುತ್ತದೆ. ಸಾಮಾನ್ಯವಾಗಿ ಚಿನ್ನಸ್ವಾಮಿ ಸ್ನೇಹಿ ಪಿಚ್. ಕಳೆದ ಪಂದ್ಯದಲ್ಲಿ ಸ್ಪಿನ್ನರ್ಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದರು. ರನ್ ಬೆನ್ನತ್ತಿದ ಆರ್ಸಿಬಿ ಗೆಲುವು ಸಾಧಿಸಿತ್ತು.