ಹೈದರಾಬಾದ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ದೊರಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ಇಂದು ದ್ವಿತೀಯ ಪಂದ್ಯ ನಡೆಯಲಿದ್ದು ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡ ಮುಖಾಮುಖಿ ಆಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.
ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ IST ಕ್ಕೆ ಆರಂಭವಾಗಲಿದೆ. ಇದನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ಹಾಟ್ಸ್ಟಾರ್ನಲ್ಲಿ ಡಿಜಿಟಲ್ ಆಗಿ ಸ್ಟ್ರೀಮ್ ಮಾಡಲಾಗುತ್ತದೆ.
ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ.
ನೆದರ್ಲೆಂಡ್ಸ್ ತಂಡ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ವೆಸ್ಲಿ ಬ್ಯಾರೆಸಿ, ಬಾಸ್ ಡಿ ಲೀಡೆ, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ತೇಜಾ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ರೋಲೋಫ್ ವ್ಯಾನ್ ಡಿ ಮೆರ್ವೆ, ಲೋಗನ್ ವ್ಯಾನ್ ಬೀಕ್, ಪಾಲ್ ವ್ಯಾನ್ ಮೀಕೆರೆನ್, ಆರ್ಯನ್ ದತ್.