ಏಪ್ರಿಲ್ 15 ರಂದು ಬೆಂಗಳೂರಿನಲ್ಲಿ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವೆ ಐಪಿಎಲ್ 2026 ಪಂದ್ಯ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ ಇದೀಗ ಮೂರನೇ ಪಂದ್ಯವನ್ನಾಡಲು ಸಜ್ಜಾಗಿದೆ. ಗುರುವಾರ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ಲಖನೌ ಸೂಪರ್‌ಜೈಂಟ್ಸ್ ವಿರುದ್ಧ ಸೆಣಸಾಡಲಿದೆ.
ಉಭಯ ತಂಡಗಳು ಈವರೆಗೆ ಐಪಿಎಲ್‌ನಲ್ಲಿ ಆರು ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್‌ಸಿಬಿ 4 ಪಂದ್ಯಗಳನ್ನು ಗೆದ್ದಿದೆ. ಲಕ್ನೋ ಎರಡು ಪಂದ್ಯ ಮಾತ್ರ ಜಯಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್, ಮಂಗೇಶ್ ಯಾದವ್. ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ, ಸುಯಶ್ ಶರ್ಮಾ.
ಲಖನೌ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಬ್ ಪಂತ್ (ನಾಯಕ), ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ, ಜಾರ್ಜ್ ಲಿಂಡೆ, ಮೊಹಮ್ಮದ್ ಶಮಿ, ಅವೇಶ್ ಖಾನ್, ದಿಗ್ವೇಶ್ ಸಿಂಗ್ ರಾಠಿ, ಪ್ರಿನ್ಸ್ ಯಾದವ್.

