News Karnataka Kannada
Thursday, May 09 2024
ಕ್ರೀಡೆ

ಉಡುಪಿ: ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌- ವಿದ್ಯಾರ್ಥಿನಿಗೆ ಚಿನ್ನದ ಪದಕ

Udupi: Commonwealth Powerlifting Championship - Gold medal for girl student of Women's Degree College
Photo Credit : News Kannada

ಉಡುಪಿ: ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಡಾ.ಜಿ.ಶಂಕರ್‌ ಸರ್ಕಾರಿ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಮಹಿಳೆಯರ ಜೂನಿಯರ್‌ 84 ಕೆ.ಜಿ ವಿಭಾಗದಲ್ಲಿ ಎಕ್ವಿಪ್ಟ್‌ ಪವರ್‌ಲಿಫ್ಟಿಂಗ್‌ನಲ್ಲಿ ಪ್ರಥಮ ಸ್ಥಾನ, ಸ್ಕ್ವಾಟ್‌ನಲ್ಲಿ 193 ಕೆ.ಜಿ ಭಾರ ಎತ್ತುವ ಮೂಲಕ ಕೂಟ ದಾಖಲೆ ನಿರ್ಮಿಸಿದ್ದಾರೆ. ಇಕ್ವಿಪ್ಟ್‌ ಹಾಗೂ ಅನ್‌ ಎಕ್ವಿಪ್ಟ್‌ ಬೆಚ್‌ಪ್ರೆಸ್‌ ಸ್ಪರ್ಧೆಯಲ್ಲಿ ಬಂಗಾರದ ಪದಕದ ಜತೆಗೆ ಬಲಶಾಲಿ ಮಹಿಳೆ ಎಂಬ ಟೈಟಲ್ ದೊರೆಯಿತು ಎಂದು ಪ್ರತೀಕ್ಷಾ ತಿಳಿಸಿದರು.

ಈ ಸಾಧನೆಗೆ ಪೋಷಕರು, ಕೋಚ್‌, ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡೆ ಹಾಗೂ ಯುವ ಸಬಲೀಕರಣ ಇಲಾಖೆ ಉಪ ನಿರ್ದೇಶಕರು ಹಾಗೂ ಸಿಬ್ಬಂದಿ ಪ್ರೋತ್ಸಾಹ ಕಾರಣ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು