ಕ್ರೀಡೆ

ಉಜಿರೆ: ಕ್ರೀಡಾ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುವುದು ಅತ್ಯಗತ್ಯ – ಡಾ.ಎಸ್ ಸತೀಶ್‌ಚಂದ್ರ

ಉಜಿರೆ: ಮೊದಲಿನಿಂದಲೂ ಭಾರತ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಇದೀಗ ಉಳಿದ ಕ್ಷೇತ್ರದಂತೆ ಕ್ರೀಡಾ ಕ್ಷೇತ್ರವೂ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್ ಸತೀಶ್‌ ಚಂದ್ರ ಹೇಳಿದರು.

ನ.27ರಂದು ಉಜಿರೆ ಶ್ರೀ.ಧ.ಮಂ ಕಾಲೇಜು ಮತ್ತು ಕರ್ನಾಟಕ ರಾಜ್ಯ ವೇಟ್ ಲಿಫ್ಟ್ಸ್ ಅಸೋಸಿಯೇಶನ್ ವತಿಯಿಂದ ನಡೆದ ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2022 ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಕೋರಿದರು.

ಕ್ರೀಡಾ ಚಟುವಟುಕೆಗಳ ಪ್ರಾಮುಖ್ಯತೆಯನ್ನು ಅರಿತುಕೊಂಡು, ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಶಕ್ಕೆ ಕೀರ್ತಿ ತರುವಂತಹ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಸಾಕ್ಷಿ ಎನ್ನುವಂತೆ ವಿವಿಧ ಅಂತರಾಷ್ಟೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಮಾಡಿರುವಂತಹ ಸಾಧನೆಗಳು. ಇದಕ್ಕೆ ಪೂರಕವಾಗಿ ಬಹುತೇಕ ಎಲ್ಲಾ ಶಿಕ್ಷಣ ಸಂಸ್ಥೆಗಳು ಪಠ್ಯಯೊಂದಿಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡುತ್ತಿರುವುದಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆ ವೇಟ್‌ಲಿಫ್ಟಿಂಗ್ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದು, ಇಲ್ಲಿನ ಸಂಸ್ಕೃತಿ,ಆಹಾರ ಪದ್ಧತಿ, ಜೀವನ ಶೈಲಿ ಹಾಗೂ ತರಬೇತಿ ಕ್ರೀಡಾಪಟುಗಳಿಗೆ ಹೇಳಿ ಮಾಡಿಸಿದಂತಿದೆ. ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಭಾವಹಿಸಬೇಕೇ ವಿನಃ ಗೆಲುವಿಗಾಗಿ ಅನ್ಯಮಾರ್ಗಗಳನ್ನು ಹುಡುಕಬಾರದು ಎಂದು ಕರ್ನಾಟಕ ರಾಜ್ಯ ವೇಟ್‌ಲಿಫ್ರ‍್ಸ್ ಅಸೋಸಿಯೇಶನ್ ಕಾರ್ಯದರ್ಶಿಯಾದ ಎಸ್.ಎಚ್.ಆನಂದೇ ಗೌಡ ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎನ್.ಉದಯಚಂದ್ರ ಮಾತನಾಡಿ ಕ್ರೀಡಾಳುಗಳು ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಬೇಕು ಎಂದರು. ಕ್ರೀಡಾಪಟುಗಳು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊAಡು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಚೌಟ, ಕಾಲೇಜಿನ ದೈಹಿಕ ಶಿಕ್ಷಣ ಮಾರ್ಗದರ್ಶಕರಾದ ರಮೇಶ್. ಹೆಚ್. ಹಾಗೂ ವಿವಿಧ ಕಾಲೇಜಿನಿಂದ ಆಗಮಿಸಿದ ಮಾರ್ಗದರ್ಶಕರು, ನಿರ್ಣಾಯಕರು ಹಾಜರಿದ್ದರು. ಮೂರು ದಿನಗಳಕಾಲ ನಡೆಯಲಿರುವ ಈ ಸ್ಪರ್ದೆಯಲ್ಲಿ ಒಟ್ಟು 340 ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ರಮೇಶ್ ಹೆಚ್ ಸ್ವಾಗತಿಸಿ, ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುವೀರ್ ಜೈನ್ ನಿರೂಪಿಸಿದರು.

Sneha Gowda

Recent Posts

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

21 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

31 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

44 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

11 hours ago