ನ್ಯೂಯಾರ್ಕ್: ವಿಶ್ವ ನಂ.1 ಟೆನಿಸಿಗರಾದ ಇಟಲಿಯ ಯಾನ್ನಿಕ್ ಸಿನ್ನರ್ ಹಾಗೂ ಪೋಲೆಂಡ್‌ನ ಇಗಾ ಸ್ವಿಯಾಟೆಕ್ ಯುಎಸ್ ಓಪನ್ ಗ್ರ್ಯಾನ್‌ಸ್ಲಾಂ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಹಾಗೂ ಮಹಿಳಾ ಸಿಂಗಲ್ಸ್‌ನಲ್ಲಿ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಶನಿವಾರ ರಾತ್ರಿ ನಡೆದ 3ನೇ ಸುತ್ತಿನ ಪಂದ್ಯದಲ್ಲಿ 23 ವರ್ಷದ ಸಿನ್ನರ್ ಆಸ್ಟ್ರೇಲಿಯಾದ ಕ್ರಿಸ್ಟೋಫರ್ ಓ”ಕಾನ್ನೆಲ್ ವಿರುದ್ಧ 6-1, 6-4, 6-2 ಸೆಟ್‌ಗಳಲ್ಲಿ ಸುಲಭ ಗೆಲುವು ಸಾಧಿಸಿದರು. ಆಸ್ಟ್ರೇಲಿಯನ್ ಓಪನ್ ಬಳಿಕ 2ನೇ ಗ್ರ್ಯಾನ್‌ಸ್ಲಾಂ ಗೆಲ್ಲುವ ಕಾತರದಲ್ಲಿರುವ ಸಿನ್ನರ್, 4ನೇ ಸುತ್ತಿನಲ್ಲಿ ಅಮೆರಿಕದ 14ನೇ ಶ್ರೇಯಾಂಕಿತ ಟಾಮಿ ಪೌಲ್ ವಿರುದ್ಧ ಸೆಣಸಾಡಲಿದ್ದಾರೆ. ಇದೇ ವೇಳೆ 5ನೇ ಶ್ರೇಯಾಂಕಿತ ಡ್ಯಾನಿಲ್ ಮೆಡ್ವೆಡೆವ್, 8ನೇ ಶ್ರೇಯಾಂಕಿತ ಕ್ಯಾಸ್ಪೆರ್ ರುಡ್ ಕೂಡಾ 4ನೇ ಸುತ್ತು ಪ್ರವೇಶಿಸಿದರು.

