ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ ಹೋರಾಟ ಮುಗಿಸಿ ತವರಿಗೆ ವಾಪಸ್ಸಾಗಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಇವರು ಶನಿವಾರ, ಆಗಸ್ಟ್ 17 ರಂದು ದೆಹಲಿಗೆ ಆಗಮಿಸಿದ ಅವರಿಗೆ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು. ಆ ಬಳಿಕ ನಡೆದ ಮೆರವಣಿ ವೇಳೆ ವಿನೇಶ್ ಫೋಗಟ್ ಕಣ್ಣೀರು ಹಾಕಿದರು.
ಇದೇ ವೇಳೆ ಮಾತನಾಡಿದ ವಿನೇಶ್ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ 2024 ರ ಸಮಯದಲ್ಲಿ ನೀಡಿದ ಬೆಂಬಲಕ್ಕಾಗಿ ಇಡೀ ದೇಶಕ್ಕೆ ನಾನು ಧನ್ಯವಾದಗಳು. ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಎಂದು ಭಾವುಕರಾದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿನೇಶ್ ಫೋಗಟ್ ಫೈನಲ್‌ವರೆಗಿನ ಹಾದಿ ಅಷ್ಟೇನೂ ಸುಲಭವಾಗಿರಲಿಲ್ಲ. ಮೊದಲ ಸುತ್ತಿನಲ್ಲೇ ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಸೋಲನ್ನೇ ಕಾಣದ ಜಪಾನಿನ ಯು ಸುಸಾಕಿಯನ್ನು ಮಣಿಸಿದ್ದರು. ಆ ಬಳಿಕ ಅದೇ ದಿನ ಇನ್ನಿಬ್ಬರು ಕುಸ್ತಿಪಟುಗಳನ್ನು ವಿನೇಶ್ ಮಣಿಸಿ ಫೈನಲ್ ಪ್ರವೇಶಿಸಿದ್ದರು.

