ದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಯೆರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚಿದ್ದ ಕಾರಣ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು.
ಆ ಬಳಿಕ ಈ ನಿರ್ಧಾರದ ವಿರುದ್ಧ ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಇದೀಗ ವಿನೇಶ್ ಅವರ ಮನವಿಯ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ, ‘ಒಲಿಂಪಿಕ್ಸ್ ಅಂತ್ಯದ ವೇಳೆಗೆ ಅಂದರೆ ಆಗಸ್ಟ್ 11 ಕ್ಕೂ ಮುನ್ನ ತೀರ್ಪು ನೀಡುವುದಾಗಿ ತಿಳಿಸಿದೆ.

