Bengaluru 25°C

ವಿನೇಶ್ ಫೋಗಟ್ ಅನರ್ಹ; ಐಒಎ ಅಧ್ಯಕ್ಷೆ ಪಿಟಿ ಉಷಾ ಏನಂದ್ರು ?

Ptusha

ದೆಹಲಿ: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್​ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಕನಸು ಕೂಡ ಭಗ್ನಗೊಂಡಿದೆ. ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ ಹೆಚ್ಚಿದ್ದ ಕಾರಣದಿಂದ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ.


ಇದೀಗ ವಿನೇಶ್​ರನ್ನು ಭೇಟಿಯಾಗಿದ್ದ ಐಒಎ ಅಧ್ಯಕ್ಷೆ ಪಿಟಿ ಉಷಾ ಮಾತನಾಡಿ, ವಿನೇಶ್ ಅವರ ಅನರ್ಹತೆ ಆಘಾತಕಾರಿಯಾಗಿದೆ. ನಾನು ಸ್ವಲ್ಪ ಸಮಯಕ್ಕೂ ಮುಂಚೆ ಒಲಿಂಪಿಕ್ ವಿಲೇಜ್ ಪಾಲಿಕ್ಲಿನಿಕ್‌ನಲ್ಲಿ ವಿನೇಶ್ ಅವರನ್ನು ಭೇಟಿಯಾಗಿದ್ದೆ ಮತ್ತು ಅವರಿಗೆ ಭಾರತೀಯ ಒಲಿಂಪಿಕ್ ಸಂಸ್ಥೆ, ಭಾರತ ಸರ್ಕಾರ ಮತ್ತು ಇಡೀ ದೇಶದಿಂದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ. ನಾವು ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.


ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ ಸಮಿತಿಗೆ ಪತ್ರ ಬರೆದು ವಿನೇಶ್ ಅವರನ್ನು ಹೊರಗಿಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದಿದ್ದಾರೆ. ಇದರ ಜೊತೆಗೆ ವಿನೇಶ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಇವರು, ‘ವಿನೇಶ್ ಅವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದು ಹೇಳಿದ್ದಾರೆ.


 

Nk Channel Final 21 09 2023