News Karnataka Kannada
Sunday, May 12 2024
ಕ್ರೀಡೆ

ಏಷ್ಯನ್ ಗೇಮ್ಸ್ ನಿಂದ ಹಿಂದೆ ಸರಿದ ಕುಸ್ತಿಪಟು ವಿನೇಶ್ ಫೋಗಟ್

Vinesh Phogat
Photo Credit : Twitter

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಮಂಗಳವಾರ ಏಷ್ಯನ್ ಕ್ರೀಡಾಕೂಟದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಟ್ವಿಟರ್’ನಲ್ಲಿ ಮಾಹಿತಿ ನೀಡಿದ  ಆಟಗಾರ್ತಿ ವಿನೇಶ್ ಫೋಗಟ್, ಆಗಸ್ಟ್ 13ರಂದು ತರಬೇತಿಯ ಸಮಯದಲ್ಲಿ ಎಡ ಮೊಣಕಾಲಿಗೆ ಗಾಯವಾಗಿದೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ.

‘ಸ್ಕ್ಯಾನ್ ಮತ್ತು ಪರೀಕ್ಷೆಗಳನ್ನ ಮಾಡಿದ ನಂತರ, ದುರದೃಷ್ಟವಶಾತ್, ನಾನು ಚೇತರಿಸಿಕೊಳ್ಳಲು ಶಸ್ತ್ರಚಿಕಿತ್ಸೆಯೊಂದೇ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ’ ಎಂದು ಫೋಗಟ್ ಬರೆದಿದ್ದಾರೆ, ನಾನು ಆಗಸ್ಟ್ 17 ರಂದು ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತೇನೆ.

ಮುಂದುವರೆದು. . .ಇನ್ನು 2018ರಲ್ಲಿ ಜಕಾರ್ತಾದಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವುದು ನನ್ನ ಕನಸಾಗಿತ್ತು. ಆದರೆ ದುರದೃಷ್ಟವಶಾತ್, ಈ ಗಾಯವು ಈಗ ನನ್ನ ಭಾಗವಹಿಸುವಿಕೆಯನ್ನ ತಡೆದಿದೆ. ಮೀಸಲು ಆಟಗಾರನನ್ನ ಏಷ್ಯನ್ ಗೇಮ್ಸ್ಗೆ ಕಳುಹಿಸಲು ನಾನು ತಕ್ಷಣ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು