ನವದೆಹಲಿ: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕೊನೆಯ ಕ್ಷಣದಲ್ಲಿ ವೀಸಾ ಪಡೆದ ಇವರು ಮ್ಯಾಡ್ರಿಡ್ನಲ್ಲಿ ಪಂದ್ಯದಲ್ಲಿ ಜಯಗಳಿಸಿರುವುದು ಅದ್ಭುತ.
ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ಮರೀರಾ ತ್ಯುಮೆರ್ಕೋವಾ ವಿರುದ್ಧ 10-5 ಅಂಕಗಳ ಭರ್ಜರಿ ಗೆಲುವು ಸಾಧಿಸಿ ಚಿನ್ನಕ್ಕೆ ಕೊಳರೊಡ್ಡಿದರು. ಇದೇ ತಿಂಗಳು 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಮುನ್ನ ನೀಡಿದ ಉತ್ತಮ ಪ್ರದರ್ಶನವಾಗಿದೆ.

