News Karnataka Kannada
Saturday, May 04 2024
ಕ್ರೀಡೆ

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡ ವಿರಾಟ್ ಕೊಹ್ಲಿ

Milestone day: Virat Kohli completes 25,000 international runs
Photo Credit : IANS

ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಎದುರಾಳಿ ಪಾಕಿಸ್ಥಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್, ಭಾರತ ತಂಡಕ್ಕೆ ವೀರೋಚಿತ ಜಯ ತಂದಿತ್ತರು.

ಇದೇ ವೇಳೆ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾನುವಾರ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ (ಎಂಸಿಜಿ) ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಈ ದಾಖಲೆಯನ್ನು ಬರೆದಿದ್ದಾರೆ. 53 ಎಸೆತಗಳನ್ನು ಎದುರಿಸಿದ ಅವರು ಆರು ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳೊಂದಿಗೆ ಅಜೇಯ 82 ರನ್ ಗಳಿಸಿದರು. ಟಿ20 ಕ್ರಿಕೆಟ್ ಇತಿಹಾಸದ ಅತ್ಯಂತ ಸುಂದರ ಇನ್ನಿಂಗ್ ಆಡಿದ ವಿರಾಟ್ ಇದೇ ವೇಳೆ ರೋಹಿತ್ ಶರ್ಮಾ ದಾಖಲೆ ಮುರಿದರು.

ಈ ಪಂದ್ಯಕ್ಕೂ ಮೊದಲು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಾಯಕ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದರು. ಅಜೇಯ 82 ರನ್ ಗಳಿಸಿದ ವಿರಾಟ್‌ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ 3,794 ರನ್‌ ಬಾರಿಸಿದರು. ರೋಹಿತ್‌ ಶರ್ಮ ಅವರ 3,741 ರನ್‌ ದಾಖಲೆಯನ್ನು ಹಿಂದಿಕ್ಕಿದರು.

ಕೊಹ್ಲಿ ಇದೀಗ ಟಿ20 ವಿಶ್ವಕಪ್ ಇತಿಹಾಸದಲ್ಲಿ 900 ರನ್ ಗಡಿ ದಾಟಿದ 3ನೇ ಆಟಗಾರ ಎನಿಸಿಕೊಂಡಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (1,016) ಮತ್ತು ಕ್ರಿಸ್ ಗೇಲ್ (965) ಸದ್ಯಕ್ಕೆ ಕೊಹ್ಲಿಗಿಂತ ಮೇಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು