Bengaluru 28°C
Ad

ಲಂಡನ್‌ನಲ್ಲಿ ವಿರಾಟ್‌ ಕೊಹ್ಲಿ- ಅನುಷ್ಕಾ ಸುತ್ತಾಟ: ವಿಡಿಯೋ ವೈರಲ್‌

Virat

ಲಂಡನ್:‌ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಲಂಡನ್‌ನಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ವಿರಾಟ್‌ ಕೊಹ್ಲಿಗೆ ಎರಡನೇ ಮಗು ಆದಾಗಿನಿಂದಲೂ ಅವರು ಅಲ್ಲಿಯೇ ವಾಸಿಸುತ್ತಿದ್ದಾರೆ. ಈಗ ವಿರಾಟ್ ಕೊಹ್ಲಿ ಅವರಿಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಜೊತೆ ಲಂಡನ್‌ನ ಬೀದಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದ ಖ್ಯಾತ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ಕಿಂಗ್ ಕೊಹ್ಲಿ ಲಂಡನ್‌ನಲ್ಲಿ ‘ಕಾಮನ್ ಮ್ಯಾನ್’ ಆಗಿ ತಿರುಗಾಡುತ್ತಿದ್ದಾರೆ. ವಿಡಿಯೋದಲ್ಲಿ ಕಿಂಗ್ ಕೊಹ್ಲಿ ಪತ್ನಿ ಅನುಷ್ಕಾ ಜೊತೆ ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು.

ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ, ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಚುಟುಕು ಫಾರ್ಮೆಟ್‌ಗೆ ವಿದಾಯ ಹೇಳಿದ್ದಾರೆ. ಅವರು ಸದ್ಯ ಏಕದಿನ ಹಾಗೂ ಟೆಸ್ಟ್‌ ತಂಡದ ಪರ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಬಾಂಗ್ಲಾದೇದ ವಿರುದ್ಧ ಆರಂಭವಾಗಲಿರುವ ಟೆಸ್ಟ್‌ ಸರಣಿಗೆ ಇವರು ತಂಡ ಸೇರಿಕೊಳ್ಳಲಿದ್ದಾರೆ. ವಿರಾಟ್‌ ಕೊಹ್ಲಿ ಈಗ ಲಂಡನ್‌ನಲ್ಲಿ ಸುತ್ತಾಡುತ್ತಿರುವುದು ಸಖತ್ ವೈರಲ್ ಆಗುತ್ತಿದೆ.

Ad
Ad
Nk Channel Final 21 09 2023