Categories: ಕ್ರೀಡೆ

ಸಚಿನ್‌ ತೆಂಡೂಲ್ಕರ್‌ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕಿಂಗ್ ವಿರಾಟ್ ಕೊಹ್ಲಿಏಕದಿನ ಕ್ರಿಕೆಟ್‌ನ 49ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅವರ ಹುಟ್ಟು ಹಬ್ಬದ ದಿನವೇ ಅವರ ಬ್ಯಾಟ್‌ನಿಂದ ಈ ವಿಶೇಷವಾದ ಶತಕ ದಾಖಲಾಗಿದೆ. ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 48ನೇ ಶತಕ ಸಿಡಿಸಿದ್ದ ಕೊಹ್ಲಿ, ನಂತರ ಎರಡು ಬಾರಿ ಶತಕದ ಸನಿಹ ಬಂದು ಔಟಾಗಿದ್ದರು. ನವೆಂಬರ್ 5ರಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಕಿಂಗ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟುವ ಮೂಲಕ ಅಭಿಮಾನಿಗಳಿಗೆ ಡಬಲ್ ಖುಷಿ ನೀಡಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 277 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಚಿನ್ ತೆಂಡೂಲ್ಕರ್ 452 ಏಕದಿನ ಇನ್ನಿಂಗ್ಸ್‌ಗಳಲ್ಲಿ 49 ಶತಕ ಸಿಡಿಸುವ ಮೂಲಕ ಈವರೆಗೂ ಮೊದಲ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ ಸಚಿನ ಸಾಧನೆ ಸರಿಗಟ್ಟಿದ್ದು, 50ನೇ ಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಳ್ಳುವ ಅವಕಾಶ ಹೊಂದಿದ್ದಾರೆ.

ವಿನೋದ್ ಕಾಂಬ್ಳಿ, ಸಚಿನ್ ತೆಂಡೂಲ್ಕರ್, ಸನತ್ ಜಯಸೂರ್ಯ, ರಾಸ್ ಟೇಲರ್, ಟಾಮ್ ಲಾಥಮ್, ಮಿಚೆಲ್ ಮಾರ್ಷ್ ಮಾತ್ರ ತಮ್ಮ ಹುಟ್ಟುಹಬ್ಬದ ದಿನ ಶತಕ ಸಿಡಿಸಿದ ಸಾಧನೆ ಮಾಡಿದ್ದು ಈಗ ವಿರಾಟ್ ಕೊಹ್ಲಿ ಕೂಡ ತಮ್ಮ ಹುಟ್ಟುಹಬ್ಬದ ದಿನ ಶತಕ ಸಿಡಿಸುವ ಮೂಲಕ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಭಾರತದಲ್ಲಿ ವಿರಾಟ್ ಕೊಹ್ಲಿ 6000 ರನ್ ಪೂರೈಸಿದ ಸಾಧನೆ ಕೂಡ ಮಾಡಿದರು. ಸಚಿನ್ ತೆಂಡೂಲ್ಕರ್ ಭಾರತದಲ್ಲಿ 6950 ರನ್ ಗಳಿಸಿದ್ದು ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

5 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

7 hours ago