News Karnataka Kannada
Friday, May 10 2024
ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

virat kohil
Photo Credit : Twitter

ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 44 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸಿದರು. 60 ಎಸೆತಗಳನ್ನು ಎದುರಿಸಿದ ವಿರಾಟ್ 7 ಫೋರ್​ನೊಂದಿಗೆ ಅಜೇಯ 44 ರನ್ ಬಾರಿಸಿ 5ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ವಿಶೇಷ ಎಂದರೆ ಈ 44 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆಗೈದ ಭಾರತದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ಈ ಸಾಧನೆ ಮಾಡಿದ ಭಾರತೀಯರೆಂದರೆ, ಸಚಿನ್ ತೆಂಡೂಲ್ಕರ್(3630 ರನ್), ವಿವಿಎಸ್ ಲಕ್ಷ್ಮಣ್(2434 ರನ್​), ರಾಹುಲ್ ದ್ರಾವಿಡ್(2143 ರನ್​), ಚೇತೇಶ್ವರ ಪೂಜಾರ(2074 ರನ್).

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು