ಮುಂಬೈ: ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರೋ ಮೊದಲ 2 ಟೆಸ್ಟ್ಗಳಿಗೆ ಮಾತ್ರ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಮೊದಲ 2 ಟೆಸ್ಟ್ಗಳಿಗೆ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರು. ಈಗ ಉಳಿದ ಮೂರು ಟೆಸ್ಟ್ಗಳಿಗೆ ಬಿಸಿಸಿಐ ಭಾರತ ತಂಡವನ್ನು ಘೋಷಿಸಲಿದೆ.
ಇನ್ನು, ಈ ಹೊತ್ತಲ್ಲೇ ಟೀಮ್ ಇಂಡಿಯಾಗೆ ವಿರಾಟ್ ಕೊಹ್ಲಿ ಬಿಗ್ ಶಾಕ್ ಕೊಟ್ಟಿದ್ದಾರೆ. ಕೊನೇ ಮೂರು ಟೆಸ್ಟ್ಗಳಿಂದಲೂ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಇವರ ಬದಲಿಗೆ ಅನುಭವಿ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರಗೆ ಅವಕಾಶ ನೀಡಬಹುದು.
ಇತ್ತೀಚೆಗೆ ಹೈದರಾಬಾದಿನ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ ತಂಡವು ಸೋಲು ಕಂಡಿತ್ತು. ಇಂಗ್ಲೆಂಡ್ ತಂಡದ ವಿರುದ್ಧ 28 ರನ್ಗಳಿಂದ ಸೋಲು ಅನುಭವಿಸಿತ್ತು.