ಬೆಂಗಲೂರು: ಆರ್ಸಿಬಿ ತಂಡದ ಹೀರೋ ಕಿಂಗ್ ವಿರಾಟ್ ಕೊಹ್ಲಿ ಅವರು ತಮ್ಮ ನೆಚ್ಚಿನ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದ ಮೂರು ದಿನಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
Ad
ಇನ್ಸ್ಟಾ ಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ.. “ಯಾವಾಗಲೂ ನಮ್ಮನ್ನು ಪ್ರೀತಿಸಿ, ಪ್ರಶಂಸಿಸುವ ಅಭಿಮಾನಿಗಳಿಗೆ ಮತ್ತೊಮ್ಮೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
Ad
ಈ ಬಾರಿ ಐಪಿಎಲ್ನಲ್ಲಿ ಆರ್ಸಿಬಿ ಅದ್ಭುತ ಪ್ರದರ್ಶನ ನೀಡಿ ಪ್ಲೇ-ಆಫ್ ಪ್ರವೇಶ ಮಾಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಇದು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ. ಸತತ 16 ಐಪಿಎಲ್ ಆಡಿದರೂ ಟ್ರೋಫಿ ಗೆಲ್ಲಲು ಆಗಲಿಲ್ಲ. ಇನ್ನು ಒಟ್ಟು 15 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ.. 741 ರನ್ ಗಳಿಸಿದ್ದಾರೆ.
Ad
https://www.instagram.com/p/C7WXPJINqc0/
Ad
Ad