274 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಶ್ರೇಷ್ಠ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯು ಜನವರಿ 30ರ ರಾತ್ರಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದೆ.
ಭಾರತದ ಲೆಜೆಂಡ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಕಣ್ಮರೆಯಾಗುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಗೊಂದಲ, ಆಕ್ರೋಶ, ಅಚ್ಚರಿ ವ್ಯಕ್ತವಾಗಿದೆ. ಕೊಹ್ಲಿಗೆ 274 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್‌ಗಳಿದ್ದರು, ಇದರಲ್ಲಿ ನೊವಾಕ್ ಜೊಕೊವಿಕ್ ಸೇರಿದಂತೆ ಅನೇಕ ಜಾಗತಿಕ ಕ್ರೀಡಾ ವ್ಯಕ್ತಿಗಳು ಸೇರಿದ್ದಾರೆ.
ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ ಡಿ-ಆಕ್ಟಿವೇಟ್ ಆಗ್ತಿದ್ದಂತೆ ಸೋಶಿಯಲ್ ಮೀಡಿಯಾದ ಎಲ್ಲಾ ಪ್ಲಾಟ್‌ಫಾರಂಗಳಲ್ಲಿ ಇದರ ಬಗ್ಗೆಯೇ ಬಿಸಿಬಿಸಿ ಚರ್ಚೆ ಆರಂಭವಾಗಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಏನೋ ಮಿಸ್ ಆಗಿದೆ ಎಂದು ಅನುಮಾನ ವ್ಯಕ್ತವಾಗಿದೆ.

