ಶ್ರೀಲಂಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ವಿಶ್ಮಿ ಗುಣರತ್ನೆ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ತಮ್ಮ 18ನೇ ವಯಸ್ಸಿನಲ್ಲಿ ಶ್ರೀಲಂಕಾ ಬ್ಯಾಟ್ಸ್ಮನ್ಗಳ ಸೆಂಚುರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.
ಬೆಲ್ಫಾಸ್ಟ್ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಲಂಕಾ ಪರ ಆರಂಭಿಕಳಾಗಿ ಕಣಕ್ಕಿಳಿದ ವಿಶ್ಮಿ ಗುಣರತ್ನೆ 98 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಶ್ರೀಲಂಕಾ ಪರ ಏಕದಿನ ಕ್ರಿಕೆಟ್ನಲ್ಲಿ ಶತಕ ಸಿಡಿಸಿದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.